ಪೊಲೀಸರಿಗೆ ಗೊತ್ತಿಲ್ದೆ ಯಾವ ದಂಧೆಯೂ ನಡೆಯಲ್ಲ: ಹೀಗಂದ ರಾಜಕಾರಣಿ ಯಾರು..?
ಮೈಸೂರು: ಶಾಲಾ ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳನ್ನ ಡ್ರಗ್ಸ್‌ಗೆ ಅಡಿಟ್ ಮಾಡಿಸುವ ದೊಡ್ಡ ಮಾಫಿಯಾ ರಾಜ್ಯದ ಹಲವೆಡೆ ನಡೆಯುತ್ತಿದೆ. ಪೊಲೀಸರು ಸೀರಿಯಸ್ ಆದ್ರೆ ಡ್ರಗ್ಸ್ ಮಾಫಿಯಾ ಕಡಿವಾಣ ಹಾಕಬಹುದು. ಪೊಲೀಸರು ಪ್ರಮಾಣ ಮಾಡಿ ಹೊರಟರೆ ನೂರಕ್ಕೆ ನೂರರಷ್ಟು ಕಡಿವಾಣ ಹಾಕಬಹುದು. ಪೊಲೀಸರಿಗೆ ಗೊತ್ತಿಲ್ಲದೆ ಯಾವ ದಂಧೆಯೂ ನಡೆಯಲ್ಲ ಎಂದು ಶಾಸಕ ರಿಜ್ವಾನ್ ಅರ್ಷದ ಹೇಳಿದರು.
ಡ್ರಗ್ಸ್ ಮಾಫಿಯಾಗೆ ಪೊಲೀಸರೇ ಕಾರಣ. ಡ್ರಗ್ಸ್ ಮಾಫಿಯಾ ಒಂದು ದೊಡ್ಡ ಇಂಡಸ್ಟ್ರಿ ರೀತಿ ಬೃಹದಾಕಾರವಾಗಿ ಬೆಳೆದಿದೆ. ಈ ಸಂಬಂಧ ನಾನು ಬೆಂಗಳೂರು ಪೊಲೀಸ್ ಆಯುಕ್ತರನ್ನ ಭೇಟಿ ಮಾಡಿದ್ದೆ. ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಿ ಅಂತಾ ವೈಯುಕ್ತಿಕವಾಗಿ ಮನವಿ ಮಾಡಿದ್ದೇನೆ ಎಂದರು.
ಸಿನಿಮಾ ಇಂಡಸ್ಟ್ರಿಗೂ ಡ್ರಗ್ಸ್ ಮಾಫಿಯಾ ನಂಟು ವಿಚಾರವಾಗಿ ಮಾತನಾಡಿದ ರಿಜ್ವಾನ್, ನನಗೆ ಸಿನಿಮಾ ರಂಗದ ನಂಟು ಕಡಿಮೆ. ಆದರೆ, ಸಿನಿಮಾ ರಂಗ ಇರಲಿ, ವಿದ್ಯಾರ್ಥಿಗಳಾಗಿರಲಿ ಇದು ಮನುಷ್ಯತ್ವಕ್ಕೆ ಧಕ್ಕೆ ತರುವ ಕೆಲಸ. ಕೆಜೆ ಹಳ್ಳಿ ಗಲಭೆಕೋರರಲ್ಲಿ ನಿಶ್ಚಿತವಾಗಿ ಕೆಲ ಯುವಕರು ಗಾಂಜಾ ಅಫೀಮಿಗೆ ಬಲಿಯಾಗಿದ್ದಾರೆ. ಡಿಜೆ ಹಳ್ಳಿ ವಿಚಾರದಲ್ಲಿ ಗಾಂಜಾ ಸೇವಿಸಿರಲಿ, ಬಿಡಲಿ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.