Posts Slider

Karnataka Voice

Latest Kannada News

ಧಾರವಾಡ ಜಿಲ್ಲೆ ಲಾಕ್‌ಡೌನ್ ಮುಂದುವರಿಕೆ…?

1 min read
Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳು ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಮಧುರ ಕಾಲೋನಿಯಲ್ಲಿರುವ ನಿವಾಸದಲ್ಲಿ ಈ ಕುರಿತು ಮಾತನಾಡಿದರು.
ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳ ಒಪ್ಪಿಗೆ ಪಡೆದು ಜಿಲ್ಲೆಯಲ್ಲಿ ಜುಲೈ 24ರವರೆಗೆ ಲಾಕ್ ಡೌನ್ ಮಾಡಲಾಗಿದೆ. ವೇಗವಾಗಿ ಹರಡುತ್ತಿರುವ ಕೊರೋನ ಸೋಂಕಿನ ಸರಪಳಿಯನ್ನು ಮುರಿಯುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಹೆಚ್ಚುವರಿಯಾಗಿ 250 ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಸಿದ್ಧ ಪಡಿಸಲಾಗುತ್ತಿದೆ. ಹಂತ ಹಂತವಾಗಿ ಕಿಮ್ಸ್ ನಲ್ಲಿ ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದೆ ಬಂದಿವೆ. ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಈಗಾಗಲೇ 80 ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 500 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗಾಗಿ ಸಿದ್ಧಪಡಿಸುವಂತೆ ಎಸ್ ಡಿ ಎಂ ಆಸ್ಪತ್ರೆಗೆ ತಿಳಿಸಲಾಗಿದೆ. ಎಸ್ ಡಿ ಎಂ ಇಂಜಿನಿಯರಿಂಗ್ ಹಾಸ್ಟೆಲ್ ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗುವುದು. ಹುಬ್ಬಳ್ಳಿಯ ಡಾಕ್ಟರ್ ಬಂಗಾರ ಶೆಟ್ಟರ್ ಅವರು ತಮ್ಮ 30‌ ಹಾಸಿಗೆಗಳ ಅಶೋಕ್ ಆಸ್ಪತ್ರೆಯನ್ನು ಕೋವಿಡ್ ಚಿಕಿತ್ಸೆಗಾಗಿ ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಜಿಲ್ಲಾಡಳಿತದಿಂದ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು‌. ಸುಚಿರಾಯು, ತತ್ವದರ್ಶಿ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗೆ ಜೊತೆ ಸಭೆ ನಡೆಸಿದ್ದಾರೆ. ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಯ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ತುರ್ತುಪರಿಸ್ಥಿತಿಯನ್ನು ಎದುರಿಸಲಾಗುವುದು. ಜಿಲ್ಲಾ ಆಸ್ಪತ್ರೆಗೆ‌ ಏಳು ಹೊಸ ಆಂಬುಲೆನ್ಸ್ ಗಳ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಹೊಸ ಆಂಬುಲೆನ್ಸ್ ಗಳು ಬರಲಿವೆ. ಒಟ್ಟು 2000 ಹಾಸಿಗೆಗಳನ್ನು ಜಿಲ್ಲೆಯಲ್ಲಿ ಸಿದ್ಧಪಡಿಸಲಾಗಿದೆ ಎಂದರು.

*ಜಿಲ್ಲೆಯಲ್ಲಿ ರಸಗೊಬ್ಬರಗಳಿಗೆ ಕೊರತೆಯಿಲ್ಲ*

ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರಗಳಿಗೆ ಕೊರತೆಯಿಲ್ಲ. ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ರಸಗೊಬ್ಬರಗಳನ್ನು ಒದಗಿಸಲಾಗುವುದು. ಖಾಸಗಿ ರಸಗೊಬ್ಬರ ಅಂಗಡಿಗಳಲ್ಲಿ ರೈತರಿಗೆ ಅಧಿಕ ಬೆಲೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.


Spread the love

Leave a Reply

Your email address will not be published. Required fields are marked *