ಧಾರವಾಡ ವಿಭಾಗದ ಶಿಕ್ಷಣ ಇಲಾಖೆಗೆ “ಈಶ್ವರ ಉಳ್ಳಾಗಡ್ಡಿ” ನೂತನ ಕಮೀಷನರ್….

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರನ್ನಾಗಿ ಈಶ್ವರ ಉಳ್ಳಾಗಡ್ಡಿ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಸಧ್ಯ ಬೀದರ ಅಪರ ಜಿಲ್ಲಾಧಿಕಾರಿಯಾಗಿದ್ದ ಉಳ್ಳಾಗಡ್ಡಿ ಅವರನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೂಡಾ ಈಶ್ವರ ಉಳ್ಳಾಗಡ್ಡಿ ಅವರು ಸೇವೆ ಸಲ್ಲಿಸಿದ್ದನ್ನ ಸ್ಮರಿಸಬಹುದಾಗಿದೆ.