1ರಿಂದ 9ನೇ ತರಗತಿ ಪರೀಕ್ಷೆ ರದ್ದು- ಶೀಘ್ರದಲ್ಲಿ ರಾಜ್ಯದ ನಿರ್ಧಾರ…!
1 min readಬೆಂಗಳೂರು: 1 ರಿಂದ 9 ನೇ ತರಗತಿ ಪರೀಕ್ಷೆ ರದ್ದು ಮಾಡುವುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವ ನಿರ್ಧಾರವನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಇನ್ನೂ ಈ ಬಾರಿಯೂ ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅಂಥ ಹೇಳಿದರು, ಇದಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದ್ರು.
ಇದೇ ವೇಳೆ ಕರೋನ ಸೋಂಕಿಗೆ ಸಂಬಂಧಪಟ್ಟಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಕೆಲವೊಂದು ಸಲಹೆಗಳನ್ನು ಪಡೆದುಕೊಳ್ಳಲಾಗುವುದು ಅಂತ ಹೇಳಿದ ಅವರು 1 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಾಳೆ ಅಂತಿಮ ನಿರ್ಧಾರವನ್ನು ಪ್ರಕಟ ಮಾಡಲಾಗುವುದೆಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಆತಂಕವನ್ನು ನಿರ್ಮಾಣ ಮಾಡಿದೆ. ಈ ಹಿನ್ನಲೆಯಲ್ಲಿ ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.