ಇಂದಿನ ಬರ್ತಡೇ “ಬಾಯ್” ನಾಳೆ ಆಸ್ಪತ್ರೆಯಿಂದ ಬಿಡುಗಡೆ: ದೇಶದ ಮೂಲೆ ಮೂಲೆಯಿಂದ ಶುಭಾಶಯ ಪಡೆದ ಮಾಜಿ ಸಿಎಂ
1 min readಬೆಂಗಳೂರು: ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ಅಧಿಕೃತ ಮಾಹಿತಿ ಲಭಿಸಿದೆ.
ಕೊರೋನಾ ಪಾಸಿಟಿವ್ ದೃಢವಾದ ನಂತರ ಚಿಕಿತ್ಸೆಗಾಗಿ ದಾಖಲಾಗಿದ್ದ ಸಿದ್ಧರಾಮಯ್ಯ, ಬರೋಬ್ಬರಿ ಹತ್ತು ದಿನಗಳನ್ನ ಆಸ್ಪತ್ರೆಯಲ್ಲೇ ಕಳೆಯುವಂತಾಗಿತ್ತು. ಇಂದು ಕೂಡ ಮತ್ತೊಮ್ಮೆ ತಪಾಸಣೆ ಮಾಡಿದಾಗ ನೆಗೆಟಿವ್ ಬಂದಿದ್ದು, ಹೀಗಾಗಿ ನಾಳೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಿದ್ದಾರೆ.
ಇಂದು 73ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಹಲವಾರು ಗಣ್ಯರು ಹುಟ್ಟುಹಬ್ಬದ ಶುಭಾಶಯ ಕೋರಿದರು.
ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಅಶ್ವತ್ಥ ನಾರಾಯಣ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ, ಸಿದ್ದಗಂಗಾ ಮಠಾಧೀಶರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಶಾಮನೂರು ಶಿವಶಂಕರಪ್ಪ, ಆರ್.ಎಲ್. ಜಾಲಪ್ಪ ಅವರು ಸೇರಿದಂತೆ ಹಲವಾರು ಸಚಿವರು, ಶಾಸಕರು ಸಿದ್ದರಾಮಯ್ಯ ಶುಭಾಶಯ ಕೋರಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಹುಟ್ಟುಹಬ್ಬಕ್ಕೆ ಶುಭ ಕೋರಿದ ಗಣ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳಿಗೆ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.