ಮಾಜಿ ಸಿಆರ್ ಪಿ ಹಾಲಿ ಶಿಕ್ಷಕ ಕೊರೋನಾದಿಂದ ಸಾವು
ಹಾಸನ: ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಂಡ ನಂತರವೂ ಶಿಕ್ಷಕರು ಕೊರೋನಾದಿಂದ ಸಾವಿಗೀಡಾಗುತ್ತಿರುವುದು ಮಾತ್ರ ಇನ್ನೂ ನಿಲ್ಲುತ್ತಲೇ ಇಲ್ಲ. ಕೆಲವು ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕರೋರ್ವರು ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ನಡೆದಿದೆ.
ಹಾಸನ ಜಿಲ್ಲೆ ಅರಸಿಕೇರಿ ತಾಲೂಕಿನ ಕೆ.ಪಾಳ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕಲ್ಯಾಣಕುಮಾರ ಅವರೇ ಸಾವಿಗೀಡಾಗಿದ್ದು, ಈ ಹಿಂದೆ ಇವರು ಸಿಆರ್ಪಿ ಆಗಿ ಕಾರ್ಯನಿರ್ವಹಣೆ ಮಾಡಿದ್ದರು.
ಕಲ್ಯಾಣಕುಮಾರ ಅವರು ತಾವು ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ ವಿದ್ಯಾರ್ಥಿಗಳೊಂದಿಗೆ ಮತ್ತು ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸದಾಕಾಲ ಶಿಕ್ಷಣದ ಉನ್ನತಿಗಾಗಿ ಶ್ರಮಿಸುತ್ತಿದ್ದರೆಂದು ಪ್ರತಿಯೊಬ್ಬರು ಹೇಳುತ್ತಿದ್ದಾರೆ.
ಶಿಕ್ಷಕ ಕಲ್ಯಾಣಕುಮಾರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಂಬನಿ ಮಿಡಿದು ಅವರ ಆತ್ಮಕ್ಕೆ ಶಾಂತಿ ನೀಡಲಿ. ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.