187 ಕೋಟಿ ಹಗರಣ, ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ…
1 min readಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಪರಿಶಿಷ್ಟ ವರ್ಗಗಳ ಕಲಾಣ್ಯ ಇಲಾಖೆಯ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣದಲ್ಲಿ ಶಾಮೀಲಾಗಿರುವುದಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದ್ದರಿಂದ ನಾಗೇಂದ್ರ ಅವರನ್ನು ಬಂಧಿಸಲಾಗಿದೆ.
ಸತತ 48 ಗಂಟೆಯ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಇದೀಗ ನಾಗೇಂದ್ರ ಅವರನ್ನು ಬಂಧಿಸಿ ಇಡಿ ಕಚೇರಿ ಕರೆದೊಯ್ದಿದ್ದಾರೆ. ಇತ್ತ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಇಡಿ ತಂಡ ಹೋಗಿದೆ ಎನ್ನಲಾಗಿದೆ. ಬುಧವಾರವಷ್ಟೇ ನಾಗೇಂದ್ರ, ದದ್ದಲ್ ಅವರ ಆಪ್ತರು ಹಾಗೂ ಇತರ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.