ಹುಬ್ಬಳ್ಳಿಯಲ್ಲಿ “ಆಕಾಶ ಬುಟ್ಟಿ ಆವಾಂತರ”- ಹೊತ್ತಿ ಉರಿದ ಮನೆ… Exclusive video

ಆಕಾಶ ಬುಟ್ಟಿಯ ಅವಾಂತರ, ಹೊತ್ತಿ ಉರಿದ ಮನೆ
ಹುಬ್ಬಳ್ಳಿ: ಆಕಾಶ ಬುಟ್ಟಿ ಬಿದ್ದ ಪರಿಣಾಮ ಮನೆಯೊಂದಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಓಣಿಯ ರಾಘವೇಂದ್ರ ಮಠದ ಬಳಿಯಲ್ಲಿ ನಡೆದಿದೆ.
Exclusive video
ಹೌದು… ಶಿವರಾಜ ತಾಳಿಕೋಟಿ ಎಂಬುವವರ ಮನೆಗೆ ಆಕಾಶ ಬುಟ್ಟಿ ಬಿದ್ದಿರುವ ಪರಿಣಾಮ ದೊಡ್ಡ ಮಟ್ಟದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕಿನ್ನಾಲಿಗೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಇನ್ನೂ ಮನೆಯಲ್ಲಿದ್ದ ಕುಟುಂಬದ ಸದಸ್ಯರು ಗಾಬರಿಗೊಂಡಿದ್ದು, ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.