Posts Slider

Karnataka Voice

Latest Kannada News

ರೈತರ ಸಮಸ್ಯೆ ಬಗೆಹರಿಸಿ: ಕಾನೂನು ಹೋರಾಟಕ್ಕೂ ಸಿದ್ಧ

1 min read
Spread the love

ಹುಬ್ಬಳ್ಳಿ:  ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಸ್ಥಾಪಿಸಲು ಈಗಾಗಲೇ ಹೋರಾಟದ ಮೂಲಕ ಮನವಿ ಸಲ್ಲಿಸಲಾಗಿದ್ದು, ಈ ಹಿನ್ನಲೆಯಲ್ಲಿ ಕ್ರಮ ಜರುಗಿಸುವಲ್ಲಿ ವಿಳಂಬವಾದರೇ ರೈತ ಸೇನಾ ಕರ್ನಾಟಕ ಹೋರಾಟ ಸಮಿತಿಯಿಂದ ಕಾನೂನು ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ರೈತ ಸೇನಾ ಕರ್ನಾಟಕ ಮುಖಂಡ ವಿರೇಶ ಸೊಬರದಮಠ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಈಗಾಗಲೇ ಹೋರಾಟ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ವೇಳೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ ರೈತರಿಗೆ ಶೀಘ್ರವಾಗಿ ಬೆಂಬಲ ಬೆಲೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳು ನೀಡಿರುವ ಭರವಸೆಯಲ್ಲಿ ಒಂದು ವೇಳೆ ವಿಳಂಬವಾದರೇ ಸರ್ಕಾರದ ವಿರುದ್ದ ಕಾನೂನು ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಮಲ್ಲಣ್ಣ ಆಲೇಕರ್,ಗುರು ರಾಯನಗೌಡ್ರ,ಗಂಗಣ್ಣ ಈರೇಶನವರ, ಮುತ್ತು ಪಾಟೀಲ ಸೇರಿದಂತೆ ಮುಂತಾದವರಿದ್ದರು


Spread the love

Leave a Reply

Your email address will not be published. Required fields are marked *

You may have missed