ಸಿಎಂ ಬೆಳಗಾವಿಗೆ ಬರುವ ಮುನ್ನವೇ “ಸ್ಪಂದಿಸಿದಿದ್ದರೇ ನಾಳೆ ಸಂಜೆಯಿಂದಲೇ ಕರ್ನಾಟಕ ಬಂದ್” ಶಶಿಕಾಂತ ಗುರೂಜಿ ಎಚ್ಚರಿಕೆ…
ಕಬ್ಬಿಗೆ ಎಫ್ಆರ್ಪಿ ನಿಗದಿಗೆ ಆಗ್ರಹ: ಬೇಡಿಕೆ ಈಡೇರದಿದ್ದರೆ ನಾಳೆ ಸಂಜೆಯಿಂದಲೇ ಕರ್ನಾಟಕ ಬಂದ್ಗೆ ಶಶಿಕಾಂತ ಗುರೂಜಿ ಎಚ್ಚರಿಕೆ
ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಳ್ಳುವ ಮುನ್ಸೂಚನೆ ದೊರೆತಿದೆ. ಕಬ್ಬಿಗೆ ಎಫ್ಆರ್ಪಿ (ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ) ನಿಗದಿಪಡಿಸುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ, ನಾಳೆ ಸಂಜೆಯಿಂದಲೇ ಕರ್ನಾಟಕ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಶಶಿಕಾಂತ ಗುರೂಜಿ ಎಚ್ಚರಿಕೆ ನೀಡಿದ್ದಾರೆ.
ಗುರ್ಲಾಪುರದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಬ್ಬಿಗೆ ಸೂಕ್ತ ಬೆಲೆ ನಿಗದಿಯಾಗದಿದ್ದರೆ ರಾಜ್ಯದ ಎಲ್ಲ ತಾಲೂಕುಗಳಲ್ಲಿಯೂ ಬಂದ್ ನಡೆಸುವ ಅನಿವಾರ್ಯತೆ ಎದುರಾಗಲಿದೆ ಎಂದು ತಿಳಿಸಿದರು. ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದರು.
ಕಬ್ಬಿಗೆ ಹೆಚ್ಚಿನ ಬೆಲೆ ನಿಗದಿಪಡಿಸಬೇಕು ಹಾಗೂ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರೈತರು ಪಾದಯಾತ್ರೆ ನಡೆಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವತಃ ಕಿತ್ತೂರಿಗೆ ಆಗಮಿಸಿ, ಬೆಳಗಾವಿಯಲ್ಲಿ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುವ ಭರವಸೆ ನೀಡಿದ್ದರು. ಈ ಭರವಸೆಯ ಹಿನ್ನೆಲೆಯಲ್ಲಿ ನಾಳೆ ಸಭೆ ನಡೆಯಲಿದ್ದು, ರೈತರ ಬೇಡಿಕೆಗಳ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಆದರೆ, ಸಭೆಗೂ ಮುನ್ನವೇ ಶಶಿಕಾಂತ ಗುರೂಜಿ ಅವರು ಬಂದ್ನ ಎಚ್ಚರಿಕೆ ನೀಡಿರುವುದು ಹೋರಾಟದ ತೀವ್ರತೆಯನ್ನು ಹೆಚ್ಚಿಸಿದೆ. ಸರ್ಕಾರದೊಂದಿಗಿನ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸ್ಪಷ್ಟ ನಿರ್ಧಾರ ಸಿಗಲಿದೆಯೇ ಎಂಬ ಕುತೂಹಲ ಮೂಡಿದೆ.
ನಾಳೆಯ ಸಭೆಯತ್ತ ರೈತರ ಚಿತ್ತ: ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸರ್ಕಾರ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ರೈತರ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ನಿರ್ಧಾರ ಪ್ರಕಟಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಹಾಗೂ ಬಂದ್ಗೆ ಮುಂದಾಗಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.
ಹೀಗಾಗಿ, ನಾಳೆ ಬೆಳಗಾವಿಯಲ್ಲಿ ನಡೆಯಲಿರುವ ಸಭೆ ಕಬ್ಬು ಬೆಳೆಗಾರರ ಹೋರಾಟದ ಮುಂದಿನ ದಿಕ್ಕನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.
