Exclusive ಹುಬ್ಬಳ್ಳಿ ಮತ್ತೆ ಗಾಂಜಾ ಮಾರಾಟ: ಇಬ್ಬರ ಬಂಧನ
ಹುಬ್ಬಳ್ಳಿ: ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದವರ ಮೇಲೆ ಪೊಲೀಸರು ಮತ್ತೆ ಇಂದು ದಾಳಿಮಾಡಿದ್ದು ವಿಜಯಪುರ ಮೂಲದ ಇಬ್ಬರನ್ನು ಬಂಧಿಸಿ, 1200 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಮಾದಕ ವಸ್ತುಗಳ ಮಾರಾಟ ಮತ್ತು ಅಪರಾಧ ವಿಭಾಗದ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಗರದ ಕಾರವಾರ ರಸ್ತೆಯ ಚರ್ಚ್ ಬಳಿ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ದಾಳಿ ಮಾಡಿದ್ದಾರೆ.
ಮೈನುದ್ದಿನ್ (48) ಹಾಗೂ ಸಾದಿಕ್ (44) ಎಂಬುವವರನ್ನು ಬಂಧಿಸಿ, 1200 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ವಿಜಯಪುರದಿಂದ ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತಿದ್ದು ಜಾಲ ಇರಬಹುದು ಎಂದು ತಿಳಿದು ಬಂದಿದೆ.
ಮಾದಕ ವಸ್ತುಗಳ ಮಾರಾಟ ಮತ್ತು ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಕಾಡದೇವರ, ಸಿಬ್ಬಂದಿಗಳಾದ ಬಸವರಾಜ ಪುಪ್ಪತಿಹಾಳ, ಬಡಿಗೇರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.