Posts Slider

Karnataka Voice

Latest Kannada News

ಮಕ್ಕಳ ಸೇವೆಯಲ್ಲಿ ಭಗವಂತನಿದ್ದಾನೆ: ADC ಗೀತಾ ಸಿ.ಡಿ ಅಭಿಮತ…!!!

1 min read
Spread the love

ಅಕಾಡೆಮಿ ಅಧ್ಯಕ್ಷ ಬಬಲೇಶ್ವರ ಅವರ ಮಕ್ಕಳ ಬಗೆಗಿನ ಕಾಳಜಿ ಅನನ್ಯವಾದದ್ದು : ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ: ಮಕ್ಕಳ ಸೇವೆಯಲ್ಲಿ ಭಗವಂತನನ್ನು ಕಾಣುವ, ಮಕ್ಕಳ ಬಗೆಗೆ ಅಪಾರ ಕಾಳಜಿ ಕಕ್ಕುಲತೆಯನ್ನು ಹೊಂದಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರ ಕಾರ್ಯ ಅನನ್ಯವಾದದ್ದು. ನಾಡಿನ ಬಾಲಮಂದಿರದ ಮಕ್ಕಳನ್ನು ನಿಸರ್ಗದ ಮಡಿಲಿನಲ್ಲಿ ಕರೆತಂದು, ಮಕ್ಕಳ ಸೃಜನಶೀಲ ವ್ಯಕ್ತಿತ್ವ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಸಂಗಮೇಶ್ ಅವರದ್ದು ಇತರರಿಗೆ ಮಾದರಿಯಾದ ವ್ಯಕ್ತಿತ್ವವಾಗಿದೆ. ನಿಜವಾದ ಸಾಮಾಜಿಕ ಕಾಳಜಿ ಇರುವ ಇಂತವರಿಗೆ ಮತ್ತಷ್ಟು ಅವಕಾಶಗಳು ಸೀಗಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಹಳ್ಳಿಗೇರಿ ಹತ್ತಿರವಿರುವ ನೇಚರ್ ಫಸ್ಟ್ ಇಕೋ ವಿಲೇಜ್‍ದಲ್ಲಿ ವಿವಿಧ ಹತ್ತು ಜಿಲ್ಲೆಗಳಿಂದ ಆಗಮಿಸಿರುವ ಬಾಲಮಂದಿರದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಆಯೋಜಿಸಿರುವ ಎರಡನೇ ಹಂತದ ರಾಜ್ಯಮಟ್ಟದ ಕಥಾ ಕಮ್ಮಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿನ ಸೂಪ್ತಪ್ರತಿಭೆಯನ್ನು ಗುರುತಿಸಿ, ಪೆÇ್ರೀತ್ಸಾಹಿಸಲು ಬಾಲ ವಿಕಾಸ ಅಕಾಡೆಮಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳಲ್ಲಿ ಆತ್ಮಸ್ಥೈರ್ಯ, ರಾಷ್ಟ್ರಪ್ರೇಮ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾಹಿತ್ಯದ ಓದು, ಬರಹ, ಸಂಗೀತದಂತಹ ಮಾದ್ಯಮಗಳ ಮೂಲಕ ಸಂಸ್ಕಾರ ನೀಡಿ, ಬೆಳೆಸಬೇಕು ಎಂದು ಅವರು ಹೇಳಿದರು.

ಯುವ ನಾಯಕರಾದ ಸಂಗಮೇಶ ಬಬಲೇಶ್ವರ ಅವರು ಆದರ್ಶ ಗುಣಗಳನ್ನು ಅಳವಡಿಸಿಕೊಂಡಿದ್ದು, ಮಕ್ಕಳಲ್ಲಿ ಅವುಗಳನ್ನು ಬೆಳೆಸಲು ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಅವರಿಗೆ ಸಿಕ್ಕಿರುವ ಅವಕಾಶವನ್ನು ದೇವರ ಕೆಲಸವೆಂದು ತಿಳಿದು ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ. ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಮಾತನಾಡಿ, ನಮಗಿರುವ ಎಲ್ಲ ನ್ಯೂನ್ಯತೆಗಳನ್ನು ಬದಿಗಿಟ್ಟು, ಆತ್ಮವಿಶ್ವಾಸದಿಂದ ಮುನ್ನುಗ್ಗಿ ಮಕ್ಕಳೆಲ್ಲರೂ ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಬೇಕು, ಜೊತೆಗೆ ನಿಮ್ಮ ಸಾಧನೆಯ ಕಥೆಗಳನ್ನು ಜಗತ್ತು ಓದುವಂತಾದಾಗ ನಮ್ಮೆಲ್ಲರ ಪ್ರಯತ್ನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ರಾಜ್ಯದ ಸಮಸ್ತ ಮಕ್ಕಳ ಶ್ರೇಯೋಭಿವೃದ್ಧಿಗೆ ಬದ್ಧವಾಗಿದ್ದು ಅದರಲ್ಲೂ ವಿಶೇಷವಾಗಿ ಬಾಲಮಂದಿರದ ಮಕ್ಕಳಿಗಾಗಿ ಅವರ ಪ್ರಗತಿಗಾಗಿ ಸದಾ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದು ಬಬಲೇಶ್ವರ ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಧಾರವಾಡದ ತಹಶೀಲ್ದಾರ ಡಿ.ಹೆಚ್.ಹೂಗಾರ ಮಾತನಾಡಿ, ಬಾಲ ಮಂದಿರದ ವಿಶೇಷ ಮಕ್ಕಳಿಗೆ ಇಂತಹ ಸುಸಜ್ಜಿತವಾದ ಪರಿಸರಸ್ನೇಹಿ ಸ್ಥಳದಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಅವರ ವ್ಯಕ್ತಿತ್ವ ರೂಪಿಸುವ ನಿಟ್ಟಿನಲ್ಲಿ ಸಂಗಮೇಶ ಬಬಲೇಶ್ವರ ಅವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ. ಇದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ಹೇಳಿದರು.
ಅಕಾಡೆಮಿಯ ಯೋಜನಾಧಿಕಾರಿ ಭಾರತಿ ಶೆಟ್ಟರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾಗಿ ಮಲ್ಲನಗೌಡ ಪಾಟೀಲ, ಬಸವರಾಜ್ ಮರಿತಮ್ಮನವರ, ರವೀಂದ್ರ ರತ್ನಾಕರ, ದೀಪಾ ಜಾವೂರ, ಪುಷ್ಪ ಹಂಜಗಿ, ಸ್ವರ್ಣಲತಾ ಮಠದ, ಮೇಟಿ ಹಾಗೂ 9 ಜಿಲ್ಲೆಗಳಿಂದ ಆಗಮಿಸಿರುವ ಮಕ್ಕಳು, ನಿಲಯ ಪಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *

You may have missed