ಮರಳಿ ಬಾರದೂರಿಗೆ ಪಯಣ ಬೆಳೆಸಿದ ಸಾಹಿತಿ ಗೀತಾ ನಾಗಭೂಷಣ
1 min readಕಲಬುರಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಬಾರದ ಲೋಕಕ್ಕೆ ತೆರಳಿದ್ದಾರೆ.
ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್. ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತೆಯಾಗಿದ್ದರು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಗೀತಾ ನಾಗಭೂಷಣ ಅವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿಯಾಗಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು. ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದ್ದಾಗಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಇಂದು ರಾತ್ರಿ8.30 ಕ್ಕೆ ನಿಧನ
ಸಂಜೆ ಎದೆನೋವು ಅಂತ ಹೇಳಿದ್ದ ಗೀತಾ ನಾಗಭೂಷಣ್
ಹೀಗಾಗಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವು
ಮಾರ್ಚ್ 25, 1942 ರಂದು ಜನಿಸಿದ್ದ ಗೀತಾ ನಾಗಭೂಷಣ್
ಕಲಬುರಗಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಜನಿಸಿದ್ದರು.