ಗ್ರಾಮ ಪಂಚಾಯತಿ ಚುನಾವಣೆ ಅಕ್ಟೋಬರ್-ನವೆಂಬರ್ ಫಿಕ್ಸ್- ಚು.ಆಯೋಗದ ನಿರ್ಧಾರ
ಬೆಂಗಳೂರು: ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ ಅವಧಿ ಮುಗಿದು ಅದಾಗಲೇ ಹಲವು ತಿಂಗಳುಗಳೇ ಕಳೆದಿದ್ದು, ಇದೀಗ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಅಕ್ಟೋಬರ್ ಕೊನೆಯ ವಾರ ಅಥವಾ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ನಿಖರವಾದ ಮಾಹಿತಿ ಲಭಿಸಿದೆ.
ಚುನಾವಣಾ ಆಯೋಗ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿಯನ್ನ ಹಂಚಿಕೊಂಡಿದ್ದು, ಅದರಲ್ಲಿ ಚುನಾವಣೆಯ ಬಗ್ಗೆ ಸ್ಪಷ್ಟನೆಯನ್ನ ನೀಡಿದೆ.
ರಾಜ್ಯದ 5800 ಗ್ರಾಮ ಪಂಚಾಯತಿ ಚುನಾವಣೆಯನ್ನ ಅಕ್ಟೋಬರ್- ನವೆಂಬರ್ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯ ಬಂದೋಬಸ್ತ್ ಅವಶ್ಯವಿದೆ ಎಂಬುದನ್ನ ಆಯೋಗ ತಿಳಿಸಿದೆ.
ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಬರೆದಿರುವ ಈ ಪತ್ರದಲ್ಲಿ, ಇಲಾಖೆಯ ಹೆಚ್ಚುವರಿ ಪ್ರಸ್ತಾವನೆಯನ್ನ ನೇರವಾಗಿ ರಾಜ್ಯ ಸರಕಾರಕ್ಕೆ ಸಲ್ಲಿಸಬೇಕೆಂದು ಕೋರಿದೆ.