ಗ್ರಾಮ ಪಂಚಾಯತಿ ಸದಸ್ಯ ಸಾವು…!

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಪಂಚಹಳ್ಳಿಯಲ್ಲಿ ನೂತನವಾಗಿ ಆಯ್ಕೆಗೊಂಡಿದ್ದ ಗ್ರಾಮ ಪಂಚಾಯತಿ ಸದಸ್ಯ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.
40 ವಯಸ್ಸಿನ ವಿಶ್ವನಾಥ ಎಂಬುವವರೇ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಅವರು ಸಾವಿಗೀಡಾಗಿದ್ದು, ಹೃದಯಾಘಾತದಿಂದಲೇ ಸಾವು ಸಂಭವಿಸಿದೆ ಎಂದು ವೈದ್ಯರು ಹೇಳಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿ, ಜಯ ಗಳಿಸಿದ್ದ ವಿಶ್ವನಾಥ ಅವರು, ಗ್ರಾಮದ ಅಭಿವೃದ್ಧಿಗಾಗಿ ಕನಸು ಕಂಡಿದ್ದರು. ಅವರ ಸಾವು, ಗ್ರಾಮದ ನೆಮ್ಮದಿಯನ್ನ ಕಸಿದುಕೊಂಡಂತಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.