ನರೇಂದ್ರ ಗ್ರಾಮ ಪಂಚಾಯತಿ ಸದಸ್ಯ ಸಾವು…!

ಧಾರವಾಡ: ನೂತನವಾಗಿ ಆಯ್ಕೆಯಾಗಿದ್ದ ಗ್ರಾಮ ಪಂಚಾಯತಿ ಸದಸ್ಯರೋರ್ವರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮೂರನೇಯ ವಾರ್ಡಿನ ಹಾಲಿ ಸುಗಂಧರಾಜ ದೇಸಾಯಿ ಅವರೇ ಸಾವಿಗೀಡಾದ ದುರ್ದೈವಿಯಾಗಿದ್ದಾರೆ. ಬೆಳಿಗ್ಗೆ ಮಂದಿರಕ್ಕೆ ಹೋಗಿ ಬಂದು ಮನೆಯಲ್ಲಿ ಕೂತಾಗ, ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತಾದರೂ, ಯಾವುದೇ ಪ್ರಯೋಜನವಾಗಿಲ್ಲ.
ಗ್ರಾಮದಲ್ಲಿ ಸಾಕಷ್ಟು ಜನಪ್ರಿಯತೆ ಹೊಂದಿದ್ದ ಸುಗಂಧರಾಜ ಅವರು, ಹಲವು ರೀತಿಯಲ್ಲಿ ಜನಪರ ಕಾರ್ಯಗಳನ್ನ ಮಾಡಿಕೊಂಡು ಬರುತ್ತಿದ್ದರು. ಅದೇ ಕಾರಣಕ್ಕೆ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು.
ಗ್ರಾಮ ಪಂಚಾಯತಿ ಸದಸ್ಯರ ಸಾವು, ನರೇಂದ್ರ ಗ್ರಾಮದಲ್ಲಿ ಅಚ್ಚರಿ ಮೂಡಿಸಿದ್ದು, ಗ್ರಾಮದಲ್ಲಿ ನೀರವಮೌನ ಮೂಡಿದೆ.