Posts Slider

Karnataka Voice

Latest Kannada News

“2002 ಬ್ಯಾಚಿನ” ಹುಬ್ಬಳ್ಳಿ ಟ್ರಾಫಿಕ್ “ಜಮಾದಾರ”- ರೈಲಿಗೆ ತಲೆಕೊಟ್ಟು ಆತ್ಮಹತ್ಯೆ… ಛಿದ್ರ ಛಿದ್ರವಾದ ರುಂಡ…

1 min read
Spread the love

ಹುಬ್ಬಳ್ಳಿಯಲ್ಲಿ ಹೆಡ್ ಕಾನ್ಸ್ಟೇಬಲ್; ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಹುಬ್ಬಳ್ಳಿ: ನಗರದಲ್ಲಿ ಕಳೆದ ಕೆಲವು 7 ದಿನಗಳ ಹಿಂದೆ ಶಿವಾನಂದ ನಗರದಲ್ಲಿ ಸಂಚಾರಿ ಪೊಲೀಸ್ ಕಾನ್ಸ್ಟೆಬಲ್’ ಮಹೇಶ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಹಿ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಬ್ಬ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 2002 ರ ಬ್ಯಾಚಿನ್ ನಾಗರಾಜ ಹಂಚಿನಮನಿ ಎಂಬ ಹೆಡ್ ಕಾನ್ಸ್ಟೇಬಲ್ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಬಾಗದಲ್ಲಿನ ರೈಲ್ವೇ ಟ್ರ್ಯಾಕ್ ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ ತಾಲ್ಲೂಕಿನ ಅರಳಿಕಟ್ಟಿ ಗ್ರಾಮದವರಾಗಿದ್ದ ನಾಗರಾಜ ಅವರು ನಗರದ ಹಲವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ಬಹಿಸುತ್ತಿದ್ದರು.ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ರೈಲ್ವೇ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಸದ್ಯ ನಾಗರಾಜ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.


Spread the love

Leave a Reply

Your email address will not be published. Required fields are marked *