Posts Slider

Karnataka Voice

Latest Kannada News

ಕಾಮಿಡಿ ಕಿಲಾಡಿಯ ವಿನ್ನರ್ ಆಗಿದ್ದ “ರಾಕೇಶ ಪೂಜಾರಿ” ಡಾನ್ಸ್ ಮಾಡುತ್ತಿದ್ದ ವೇಳೆ ‘ಹಾರ್ಟ್ ಅಟ್ಯಾಕ್’ನಿಂದ ಸಾವು…

Spread the love

ಉಡುಪಿ : ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್​ ಆಗಿದ್ದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಘಾತರಿಂದ ಕೊನೆಯುಸಿರೆಳೆದಿದ್ದಾರೆ.

ರಾಕೇಶ್ ಪೂಜಾರಿ ಅವರು ಕಳೆದ ರಾತ್ರಿ  ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ. ಅವರ ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ನಟ ರಾಕೇಶ್ ಪೂಜಾರಿ ಈಗ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *