ಹೆಬ್ಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ..!
1 min readಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತಿ ಚುನಾವಣೆಯನ್ನ ಕೋರಂ ಅಭಾವದಿಂದ ಚುನಾವಣಾಧಿಕಾರಿಗಳು ಮುಂದೂಡಿದ ಪ್ರಕರಣ ನಡೆದಿದೆ.
ಹೆಬ್ಬಳ್ಳಿ ಗ್ರಾಮ ಪಂಚಾಯತಿಗೆ ಇಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ದಿನಾಂಕವನ್ನ ನಿಗದಿ ಮಾಡಿತ್ತು. ಆದರೆ, ನಿಗದಿತ ಸಮಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದು, ಉಪಾಧ್ಯಕ್ಷ ಸ್ಥಾನಕ್ಕೆ ಒಂದು ನಾಮಪತ್ರ ಸಲ್ಲಿಕೆಯಾಗಿದೆ.
ಚುನಾವಣೆಯ ಸಮಯವನ್ನ ಮಧ್ಯಾಹ್ನ 2 ಗಂಟೆಗೆ ನಿಗದಿ ಮಾಡಲಾಗಿತ್ತು. ಆದರೆ, 32 ಸದಸ್ಯರ ಪೈಕಿ ಕೇವಲ 15 ಜನ ಸದಸ್ಯರು ಸಭೆಗೆ ಹಾಜರಾಗಿದ್ದಾರೆ. ಹೀಗಾಗಿ, ಇದು ಕೋರಂ ಆಗುವುದಿಲ್ಲವೆಂದು ಇಂದಿನ ಚುನಾವಣೆಯನ್ನ ಮುಂದೂಡಲಾಗಿದೆ.
ನಾಳೆ ಸಂಜೆ 4 ಗಂಟೆಗೆ ಮತ್ತೆ ಹೆಬ್ಬಳ್ಳಿ ಗ್ರಾಮ ಪಂಚಾಯತಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸಭೆ ಕರೆಯಲಾಗಿದೆ.