ಹುಬ್ಬಳ್ಳಿಯ ಅಂಚಟಗೇರಿ ಬಳಿ ಅಪಘಾತ- ತಂದೆ, ಎರಡು ಮಕ್ಕಳು ದುರ್ಮರಣ…!!!
ಹುಬ್ಬಳ್ಳಿ: ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಸ್ಥಳದಲ್ಲಿ ಎರಡು ಮಕ್ಕಳು ಸೇರಿ ಮೂವರು ಸ್ಥಳದಲ್ಲಿ ಸಾವಿಗೀಡಾದ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಸಂಭವಿಸಿದೆ.
ವೀಡಿಯೋ…
ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.
ಬೈಕಿನಲ್ಲಿ ಎರಡು ಮಕ್ಕಳೊಂದಿಗೆ ತಂದೆ ತಡಸದತ್ತ ಹೊರಟಿದ್ದ ಎಂದು ಹೇಳಲಾಗಿದ್ದು, ಅವರ ಸಂಪೂರ್ಣ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ.
