ಹುಬ್ಬಳ್ಳಿ ಆಟೋ-ಟ್ರ್ಯಾಕ್ಟರ್ ನಡುವೆ ಡಿಕ್ಕಿ- ಇಬ್ಬರ ಸ್ಥಿತಿ ಚಿಂತಾಜನಕ ಐವರಿಗೆ ಗಂಭೀರ ಗಾಯ
1 min readಹುಬ್ಬಳ್ಳಿ: ಬೆಂಗಳೂರು-ಪೂನಾ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಹುಬ್ಬಳ್ಳಿ ನಗರದ ಆಟೋ ಹಾಗೂ ಗುಡ್ಡದಹೂಲಿಕಟ್ಟಿ ಗ್ರಾಮದ ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ವರೂರ ಸಮೀಪ ನಡೆದಿದ್ದು, ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಳೇಹುಬ್ಬಳ್ಳಿಯ ಸಾಧೀಕ್, ಸಲೀಮ್ ಹಾಗೂ ಬೆಳಗಲಿ ಮೂಲದ ಶೇಕರಪ್ಪ ಹುಲಗೇರಿ ಸೇರಿದಂತೆ ಇನ್ನೂ ನಾಲ್ವರು ಸೇರಿದಂತೆ ಆಟೋದಲ್ಲಿ ಎಂಟಕ್ಕೂ ಹೆಚ್ಚು ಜನರು ತೆರಳುತ್ತಿದ್ದರು. ಈ ಸಮಯದಲ್ಲಿ ವರೂರು ಗ್ರಾಮದ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಹುತೇಕರು ರಕ್ತಸಿಕ್ತವಾಗಿ ರಸ್ತೆಯಲ್ಲಿ ಬಿದ್ದಿದ್ದರು. ಸ್ಥಳೀಯರು ಮಾಹಿತಿ ನೀಡಿ, ಕಿಮ್ಸಗೆ ಕರೆತರಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಎಲ್ಲರನ್ನೂ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ.
ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯ ಮೇಲು ನೋಟಕ್ಕೆ ಕಂಡು ಬಂದಿದ್ದು, ಆತನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.