ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪೂರ್ಣಿಮಾ ಸವದತ್ತಿ ಅಮಾನತು

ಹುಬ್ಬಳ್ಳಿ: ವಂಚನೆ ಪ್ರಕರಣವೊಂದಕ್ಕೆ ಸಿಲುಕಿರುವ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಪೂರ್ಣಿಮಾ ಸವದತ್ತಿಯನ್ನ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಇಮ್ರಾನ್ ಎಲಿಗಾರ ಅಮಾನತ್ತು ಮಾಡಿ ಆದೇಶಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಎಂಬುವವರು ಮುಗ್ಧ ಜನರನ್ನು ಟಾರ್ಗೆಟ್ ಮಾಡಿ. ಸಾಲ ಕೊಡಿಸುತ್ತೇನೆಂದು ಅವರನ್ನು ನಂಬಿಸಿ. ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸಿದ್ದಾರೆಂಬ ಆರೋಪ ಅವರ ಮೇಲೆ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಸಮಿತಿಯ ಕರ್ನಾಟಕ ಉಸ್ತುವಾರಿ ಅನಿಲ್ ಯಾದವ್ ಹಾಗೂ ಸುರಭಿ ದಿವೇದಿ ಅವರ ಆದೇಶದ ಮೇರೆಗೆ ಪೂರ್ಣಿಮಾ ಸವದತ್ತಿ ಅವರನ್ನು ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಈ ಕ್ಷಣದಿಂದ ಅಮಾನತು ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಇಮ್ರಾನ್ ಎಲಿಗಾರ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.
ನಗರದಲ್ಲಿ ಹಲವರಿಗೆ ಡಿ.ಕೆ.ಶಿವಕುಮಾರ ಅವರ ಕಪ್ಪು ಹಣದಿಂದ ಲೋನ್ ಕೊಡುವುದಾಗಿ ಹಲವರಿಂದ ಹಣವನ್ನ ಪಡೆದಿದ್ದ ಪೂರ್ಣಿಮಾ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.