12ಸಾವಿನ ನಂತರದ ಆಕ್ರೋಶಕ್ಕೆ ಮಣಿದ ಕೇಂದ್ರ ಸರಕಾರ: ಸಧ್ಯದಲ್ಲೇ ಬೈಪಾಸ್ ಷಟ್ಪಥ್ ರಸ್ತೆಗೆ ಟೆಂಡರ್…
1 min readನವದೆಹಲಿ: ಧಾರವಾಡ-ಹುಬ್ಬಳ್ಳಿ ನಡುವಿನ 30 ಕಿಲೋಮೀಟರ್ ರಸ್ತೆಯನ್ನ ಷಟ್ಪಥ್ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರಕಾರ ಮುಂದಾಗಿದ್ದು, ಕೂಡಲೇ ಟೆಂಡರ್ ಕರೆಯುವಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಬಗ್ಗೆ ಇಂದು ನವದೆಹಲಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಪ್ರಮುಖರು ಭಾಗವಹಿಸಿದ್ದರು. ಇಂದಿನ ಸಭೆಯ ಬಗ್ಗೆ ಪ್ರಲ್ಹಾದ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣದ ಅಕೌಂಟನಲ್ಲಿ ಬರೆದುಕೊಂಡಿದ್ದಾರೆ.
ಫೇಸ್ ಬುಕ್ ಲ್ಲಿ ಪ್ರಲ್ಹಾದ ಜೋಶಿಯವರು ಬರೆದು ಹೀಗೆ..
ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರೊಂದಿಗೆ ಸಭೆ ನಡೆಸಿದ್ದು, ಸಚಿವರು ಹುಬ್ಬಳ್ಳಿ-ಧಾರವಾಡ ಬೈಪಾಸ್ 30 ಕಿಮಿ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಈ ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಡಿ.ಪಿ.ಆರ್. ತಯಾರಿಸಲಾಗಿದ್ದು ಸಾರ್ವಜನಿಕರ ಅನಕೂಲಕ್ಕೆ ತಕ್ಕಂತೆ ಆರ್.ಓ.ಬಿ. ಮತ್ತು ಆರ್.ಯು.ಬಿ. ನಿರ್ಮಾಣ ಮಾಡಲು ಸೂಚನೆ ನೀಡಿದ್ದು, ನಿರ್ಮಾಣಕ್ಕೆ 33 ಹೆಕ್ಟೇರ್ ಭೂ ಸ್ವಾಧೀನ ಅವಶ್ಯವಾಗಿದ್ದು, ಭೂಮಿ ವಶಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ವಿಷಯವಾಗಿ ಕಳೆದ ಜುಲೈ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಾನು ಸಭೆ ನಡೆಸಿ ಬೈಪಾಸ್ ರಸ್ತೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆಯನ್ನಾಗಿಸಲು ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಕೇಂದ್ರ ಕಛೇರಿಗೆ ಶೀಘ್ರವಾಗಿ ಕಳುಹಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ.
ಈ ಹಿಂದೆ ರಸ್ತೆ ನಿರ್ಮಿಸಿ ನಿರ್ವಹಿಸುತ್ತಿರುವ ನಂದಿ ಹೈವೇ ಇಂಫ್ರ್ಯಾಂಸ್ತ್ರಕ್ಚರ ಕ0ಪನಿಯ ಪ್ರತಿನಿಧಿಗಳು ಇಂದಿನ ಸಭೆಯಲ್ಲಿ ಭಾಗಿಯಾಗಿದ್ದು ಅವರು ಕೂಡಾ ಈ ಯೋಜನೆಗೆ ಒಪ್ಪಿಗೆ ನೀಡಿದ್ದು, ಸರಿಯಾದ ಸಹಕಾರ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ಅನಕೂಲಕ್ಕಾಗಿ ಸರ್ವಿಸ್ ರಸ್ತೆಯನ್ನು ಎರಡೂ ಕಡೆ ನಿರ್ಮಿಸಲು ಸೂಚನೆ ನೀಡಲಾಗಿದೆ
ಇಂದಿನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಗಾರಿಕಾ ಸಚಿವರೂ ಆದ ಶ್ರೀ ಜಗದೀಶ ಶೆಟ್ಟರ, ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಕಾರ್ಯದರ್ಶಿಗಳು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.