ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸುಪ್ರೀಂಕೋರ್ಟ್ ತಡೆಯಾಜ್ಞೆ…!
1 min readಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ ಪಾಲಿಕೆ ಚುನಾವಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ ಹೈಕೋರ್ಟ್ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಲಾಗಿತ್ತು.
ಇದೀಗ ಮತ್ತೆ ಚುನಾವಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ಮತ್ತೆ ಯಾವಾಗ ಎಂಬ ಪ್ರಶ್ನೆ ಮೂಡುವಂತಾಗಿದೆ. ಈಗಾಗಲೇ ಮಹಾನಗರ ಪಾಲಿಕೆ ಎರಡು ವರ್ಷದಿಂದಲೂ ಚುನಾವಣೆ ಇಲ್ಲದೇ ಅಧಿಕಾರಿಗಳ ಮೇಲೆ ನಡೆಯುತ್ತಿದೆ.
ಯಾವುದೇ ಜನಪ್ರತಿನಿಧಿಗಳು ಇಲ್ಲದೆ ಇರುವುದು ಕೂಡಾ, ಅವಳಿನಗರದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ.