ಹುಬ್ಬಳ್ಳಿ-ಧಾರವಾಡದಲ್ಲಿ ಇಬ್ಬರು ಪೌರಕಾರ್ಮಿಕರಿಗೆ ಗಂಭೀರ ಗಾಯ..!
ಹುಬ್ಬಳ್ಳಿ: ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಇಬ್ಬರು ಪೌರ ಕಾರ್ಮಿಕರು ಪ್ರತ್ಯೇಕ ಘಟನೆಯಲ್ಲಿ ಎರಡು ಘಟನೆಯಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೊನ್ನಪ್ಪನ ಹೊಟ್ಟೆಯ ಮೇಲೆ ಕಲ್ಲು ಬಿದ್ದ ಪರಿಣಾಮ ತೀವ್ರವಾಗಿ ಗಾಯವಾಗಿದ್ದು, ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿಯೇ ಘಟನೆ ನಡೆದಿದ್ದರಿಂದ, ಜೊತೆಗಾರರೇ ಕಿಮ್ಸಗೆ ದಾಖಲು ಮಾಡಿದ್ದಾರೆ.
ಧಾರವಾಡದ ನವಲೂರು ಬಳಿಯಲ್ಲಿ ಸುರೇಶ ಎಂಬ ಪೌರ ಕಾರ್ಮಿಕರೋರ್ವರು ಟ್ರ್ಯಾಕ್ಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಇಂತಹ ಘಟನೆಗಳು ನಡೆದಾಗ, ಯಾವುದೇ ಅಧಿಕಾರಿಗಳು ಆಸ್ಪತ್ರೆಗೆ ಬಾರದೇ ಇರುವುದು ಸೋಜಿಗದ ಸಂಗತಿಯಾಗಿದೆ.