ಹುಬ್ಬಳ್ಳಿ-ಧಾರವಾಡದಲ್ಲಿ ಇಬ್ಬರು ಮಹಿಳೆಯರು ಆತ್ಮಹತ್ಯೆ..!
1 min readಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಮನೆಯಲ್ಲಿಯೇ ನೇಣು ಹಾಕಿಕೊಂಡು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹುಬ್ಬಳ್ಳಿ ತಿಮ್ಮಸಾಗರ ರಸ್ತೆಯ ಬೇಪಾರಿ ಪ್ಲಾಟನಲ್ಲಿ ಸಂಭವಿಸಿದೆ.
32 ವಯಸ್ಸಿನ ಶಬಾನಾ ಇಮ್ರಾನ ಬಿಜಾಪುರ ಎಂಬ ಮಹಿಳೆಯೇ ಆತ್ಮಹತ್ಯೆಗೆ ಶರಣಾಗಿದ್ದು, ಯಾವ ವಿಷಯಕ್ಕೆ ಹೀಗೆ ಮಾಡಿಕೊಂಡಿದ್ದಾರೆಂಬುದು ತಿಳಿದು ಬಂದಿಲ್ಲ.
ಘಟನೆಯ ಬಗ್ಗೆ ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರವಾದ ಕಾರಣವನ್ನ ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ.
ಧಾರವಾಡದಲ್ಲಿ ಮಹಿಳೆಯೋರ್ವಳು ಕೌಟುಂಬಿಕ ಕಲಹದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ಮಹಿಳೆಯನ್ನ ಅಶ್ವಿನಿ ಮಹೇಶ ವಡೇಕರ ಎಂದು ಗುರುತಿಸಲಾಗಿದೆ. ಮನೆಯಲ್ಲಿನ ಕಲಹದಿಂದ ಬೆಂಕಿ ಹಚ್ಚಿಕೊಂಡಿದ್ದ ಅಶ್ವಿನಿ, ಚಿಕಿತ್ಸೆ ಫಲಿಸದೇ ಹುಬ್ಬಳ್ಳಿಯ ಕಿಮ್ಸನಲ್ಲಿ ಸಾವಿಗೀಡಾಗಿದ್ದಾರೆ.
ಧಾರವಾಡ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.