ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ: ಖಾಸಗಿ ಕಂಪನಿ ಕಾರ್ಯಕ್ರಮದಲ್ಲಿ ಶೆಟ್ಟರ ಭಾಗಿ

ಹುಬ್ಬಳ್ಳಿ: ಹುಬ್ಬಳ್ಳಿ ಗೋಕುಲ ಕೈಗಾರಿಕಾ ವಸಹಾತುವಿನಲ್ಲಿನ ವಿವಿಧ ಉದ್ದಿಮೆ ಹಾಗೂ ಕಂಪನಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 180 ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಲಾಯಿತು. ಗೋಕೊಲ ಕೈಗಾರಿಕಾ ಹೊಸಹಾತುವಿನ ಫಾಸ್ಟನರ್ಸ್ ಅ್ಯಂಡ್ ಅಲೈಯ್ಡ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ಆಹಾರ ಧಾನ್ಯ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ಮೊದಲಿಗೆ ವಿವಿಧ ಕಂಪನಿಗಳ 180 ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ನೀಡಲಾಗಿದೆ. ಹಂತ ಹಂತವಾಗಿ ಎಲ್ಲಾ ಕಾರ್ಮಿಕರಿಗೂ ಆಹಾರಧಾನ್ಯದ ಕಿಟ್ ನೀಡಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅಶೋಕ ಬಾಳಿಗಟ್ಟ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿಗಳಾದ ಮಾರಿಕಾಂಬ ಹುಲಕೋಟಿ, ಅಕ್ರಂ ಅಲ್ಲಾಪುರ, ಅಶೋಕ್ ಒಡಯರ್, ಸಂಗೀತಾ, ಮಾಜಿ ಪಾಲಿಕೆ ಸದಸ್ಯ ಮಹೇಶ್ ಬುರಲಿ, ಉದ್ಯಮಿಗಳಾದ ವೀರೇಂದ್ರ ಕೌಲಜಗಿ, ನಿಂಗಣ್ಣ ಬಿರಾದಾರ, ನರೇಂದ್ರ ಕುಲಕರ್ಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.