ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ಉಸಿರು ನಿಲ್ಲಿಸಿದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು… ಉಳಿದವರ ಸ್ಥಿತಿಯೂ ಗಂಭೀರ….!!!

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಇನ್ನುಳಿದ ಗಾಯಾಳುಗಳಾದ ರಾಜು ಹರ್ಲಾಪುರ(21), ವಿನಾಯಕ ಬಾತಕೇರ(12), ಪ್ರಕಾಶ ಬಾರಕೇರ(42), ಮಂಜು ತೋರದ(22), ಪ್ರವೀಣ ಚಲವಾದಿ(24), ತೇಜಸ್ ರೆಡ್ಡಿ(26) ಮತ್ತು ಶಂಕರ ರಾಯನಗೌಡ್ರ(29) ಇವರುಗಳ ಸ್ಥಿತಿಯೂ ಗಂಭೀರವಾಗಿದೆ.
ಘಟನೆ ನಡೆಯುತ್ತಿದ್ದ ಹಾಗೇ ಕಿಮ್ಸನಲ್ಲಿ ಅತ್ಯುತ್ತಮ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಆಸಕ್ತಿ ವಹಿಸಿ, ಬೆಂಗಳೂರಿನಿಂದ ವೈದ್ಯರ ತಂಡವನ್ನ ಕರೆಸಿದ್ದಾರೆ.
ಸಣ್ಣ ಕೋಣೆಯಲ್ಲಿ ಮಲಗಿದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗಳಾದ ಪರಿಣಾಮ ಸ್ಥಿತಿ ಗಂಭೀರವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.