ಕೊರೋನಾಗೆ ‘ಅಂಜಿ’ ಪಾಸಿಟಿವ್ ಪೇಸೆಂಟ್ ಹುಬ್ಬಳ್ಳಿ ಕಿಮ್ಸನಲ್ಲಿ ನೇಣಿಗೆ ಶರಣು…!

ಹುಬ್ಬಳ್ಳಿ : ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ತಾನು ಚಿಕಿತ್ಸೆ ಪಡೆಯುತ್ತಿದ್ದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಎಂಬುವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ಸಮಯದಲ್ಲಿ ತಪಾಸಣೆ ಮಾಡಿದಾಗ ಭೀಮಪ್ಪನಿಗೆ ಕೋವಿಡ್ ಪಾಸಿಟಿವ್ ಇದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದ ಹಾಗೆ, ಇವರನ್ನು ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು.
ಮದ್ಯವ್ಯಸನಿಯಾಗಿದ್ದ ಭೀಮಪ್ಪ ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಶವವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.