Posts Slider

Karnataka Voice

Latest Kannada News

ಹುಬ್ಬಳ್ಳಿ ಕೇಶ್ವಾಪುರ ಠಾಣೆ ಪೊಲೀಸರ ಕಾರ್ಯಾಚರಣೆ…!

1 min read
Spread the love

ಹುಬ್ಬಳ್ಳಿ: ನಗರದ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಗಾಂಜಾ ಮಾರಾಟಗಾರರನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ನಡೆಸಿದ ದಾಳಿಯಲ್ಲಿ ಸ್ಯಾಮುವೆಲ್ ಏಸು ಬಿಲ್ಲಾ ಹಾಗೂ ನವೀನಕುಮಾರ ಪುರುಷೋತ್ತಮ ಏಸುಮಾಲ ಎಂಬುವವರನ್ನ ಬಂಧನ ಮಾಡಲಾಗಿದೆ.

ಯುವಕರನ್ನೇ ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಬಾಬಾ ಎಂ, ತಂಡದೊಂದಿಗೆ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ.

ಬಂಧಿತ ಆರೋಪಿಗಳಿಂದ 250 ಗ್ರಾಂ ಗಾಂಜಾ ಹಾಗೂ 25 ಸಣ್ಣ ಪ್ಲಾಸ್ಕಿಕ್ ಪ್ಯಾಕೇಟ್ ಹಾಗೂ 290 ರೂಪಾಯಿ ನಗದನ್ನ ವಶಕ್ಕೆ ಪಡೆಯಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಬಾಬಾ ಎಂ ನೇತೃತ್ವದ ತಂಡ ಆರೋಪಿಗಳನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದೆ.


Spread the love

Leave a Reply

Your email address will not be published. Required fields are marked *