ಸಂಬಳ ಕೊಡದ ಮನೆಯಲ್ಲೇ ಕಳ್ಳತನ ಮಾಡಿದ ಕಿರಾತಕ…!
1 min readಹುಬ್ಬಳ್ಳಿ: ದೇಶಪಾಂಡೆನಗರದ ಅಪಾರ್ಟಮೆಂಟಿನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ದೇಶಪಾಂಡೆನಗರದಲ್ಲಿನ ಗುರು ಅಪಾರ್ಟಮೆಂಟಿನ ಮಹೇಶ ಎಂಬುವವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ ಧರ್ಮರಾಮ್ ಧರ್ಮೆಂದ್ರ ಗೋವರ್ಧನರಾಮ್ ಚೌಧರಿ ಎಂಬಾತನೇ, 475000 ಹಣವನ್ನ ದೋಚಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿಯಿಂದ 4ಲಕ್ಷ 73 ಸಾವಿರ ರೂಪಾಯಿಗಳನ್ನ ಹಾಕಿಕೊಂಡು ಇಟ್ಟಿದ್ದ ಬಿಳಿ ಬಣ್ಣದ ಬ್ಯಾಗ್ ಸಮೇತ ಪತ್ತೆ ಮಾಡಿದ್ದಾರೆ. ಪ್ರಕರಣವನ್ನ ಪೊಲೀಸರು 24 ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಕಮೀಷನರ್ ಲಾಬುರಾಮ್ ಅವರ ಮಾರ್ಗದರ್ಶನದಲ್ಲಿ ಉಪನಗರ ಠಾಣೆ ಇನ್ಸಪೆಕ್ಟರ್ ರವಿಚಂದ್ರ ಡಿ.ಬಿ ನೇತೃತ್ವದ ತಂಡ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.