ತಾರಿಹಾಳ ಬೆಂಕಿ ಅವಘಡ: 18 ವರ್ಷದ ಯುವಕ ಇನ್ನಿಲ್ಲ- 4ಕ್ಕೇರಿದ ಸಾವಿನ ಸಂಖ್ಯೆ: ಇನ್ನೂ ಮಾಲೀಕ ಸಿಕ್ಕಿಲ್ಲ….
1 min readಹುಬ್ಬಳ್ಳಿ: ನಗರದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಪ್ಯಾಕ್ಟರಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸನಲ್ಲಿ ಸಾವಿಗೀಡಾಗಿದ್ದು, ಈ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೇರಿದೆ.
ತಾರಿಹಾಳದ ಸ್ಪಾರ್ಕಲ್ ಪ್ಯಾಕ್ಟರಿಯಲ್ಲಿ ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು ಹಾಗೂ 18 ವರ್ಷದ ಯುವಕನೋರ್ವ ಘಟನೆ ನಡೆದು 12 ಗಂಟೆಯಲ್ಲಿಯೇ ಸಾವಿಗೀಡಾಗಿದ್ದಾರೆ. ಇಂದು ಬೆಳಗಿನ ಜಾವ ಮಲೀಕ್ ಕೊಪ್ಪದ ಎಂಬ 18 ವರ್ಷದ ಯುವಕ ಸಾವಿಗೀಡಾಗಿದ್ದಾನೆ.
ಘಟನೆಯ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ರಮೇಶ ಗೋಕಾಕ ಅವರು, ಇದುವರೆಗೆ ಮಾಲೀಕನ ಬಂಧನ ಮಾಡದೇ ಇರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.