Posts Slider

Karnataka Voice

Latest Kannada News

ಹುಬ್ಬಳ್ಳಿಗೆ ಬರುತ್ತಿದ್ದ ಬಸ್-ಹಾವೇರಿಯ ಕಾರಿಗೆ ಡಿಕ್ಕಿ: ತಂದೆ,ತಾಯಿ,ಮಗ,ಮಗಳು ದುರ್ಮರಣ…!

1 min read
Spread the love

ಕಲ್ಲಾಪೂರದ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರು…

ಗದಗ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಮಡೆದಿದೆ.

 

 

ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು. ಮೃತ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್​ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

 

 

ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *