Posts Slider

Karnataka Voice

Latest Kannada News

ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ರದ್ದು

1 min read
Spread the love

ಹುಬ್ಬಳ್ಳಿ: ನಗರದಲ್ಲಿ ಕಳೆದ ನಾಲ್ಕು ವರ್ಷದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇತಿತ ಕ್ಷಮತ ಸೇವಾ ಸಂಸ್ಥೆಯ ವತಿಯಿಂದ ಯಶಸ್ವಿಯಾಗಿ ಆಯೋಜನೆ ಮಾಡುತ್ತಿದ್ದ ‘ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನ ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ವರ್ಷ ರದ್ದು ಪಡಿಸಲಾಗಿದೆ.

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ವಿವಿಧ ದೇಶಗಳ 35 ರಿಂದ 40 ಅಂತಾರಾಷ್ಟ್ರೀಯ ಗಾಳಿಪಟ ಆಟಗಾರರು ಭಾಗವಹಿಸುತ್ತಿದ್ದರು. ಸರಕಾರ ಕೆಲವು ದೇಶಗಳಿಗೆ ವಿಮಾನಯಾನ ಸ್ಥಗಿತಗೊಳಿಸಿದ್ದಾರೆ.

ಗಾಳಿಪಟ ಉತ್ಸವದಲ್ಲಿ ಭಾಗವಹಿಸಲು ಅಂತಾರಾಷ್ಟ್ರೀಯ ಗಾಳಿಪಟ ಆಟಗಾರರು ಭಾರತಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಈ ವರ್ಷ ನಡೆಯಬೇಕಾಗಿದ್ದ ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದ ಜೊತೆಗೆ ಹಲವು ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮವನ್ನ ರದ್ದುಪಡಿಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಗಾಳಿಪಟ ಉತ್ಸವ ಪ್ರಿಯರು ಹಾಗೂ ಸಾರ್ವಜನಿಕರಿಗೆ ಮನವರಿಕೆ ಮಾಡಿದ್ದಾರೆ.


Spread the love

Leave a Reply

Your email address will not be published. Required fields are marked *