Posts Slider

Karnataka Voice

Latest Kannada News

ಹುಬ್ಬಳ್ಳಿಯ ನವನಗರ ಬಳಿ ಟ್ರ್ಯಾಕ್ಟರ್ ಪಲ್ಟಿ- ಮೂವರಿಗೆ ಗಂಭೀರ ಗಾಯ

Spread the love

ಹುಬ್ಬಳ್ಳಿ: ಕಬ್ಬಿಣದ ವಸ್ತುಗಳನ್ನ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರವೊಂದು ನವನಗರದ ಬಳಿ ಪಲ್ಟಿಯಾದ ಪರಿಣಾಮ ಮೂವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ನಡೆದಿದೆ.

ಮಧ್ಯಪ್ರದೇಶದ ಕೂಲಿ ಕಾರ್ಮಿಕರನ್ನ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಬಸಪ್ಪ ಅರಳಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಟ್ರ್ಯಾಕ್ಟರ ಪಲ್ಟಿಯಾಗಿದ್ದರಿಂದ ಮಹಿಳಾ ಕೂಲಿ ಕಾರ್ಮಿಕರಿಗೆ ಕೆಳಗೆ ಬಿದ್ದಿದ್ದರಿಂದ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಮೂವರನ್ನ ಕಿಮ್ಸಗೆ ರವಾನೆ ಮಾಡಲಾಗಿದೆ.

ನವನಗರದ ಪ್ರಮುಖ ಸ್ಥಳದಲ್ಲಿಯೇ ಘಟನೆ ನಡೆದಿದ್ದರಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಹುಬ್ಬಳ್ಳಿ ಉತ್ತರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸಂಚಾರವನ್ನ ಸುಗಮಗೊಳಿಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *