ಹುಬ್ಬಳ್ಳಿ ಪೊಲೀಸರ “ಭಾರೀ” ಕಾರ್ಯಾಚರಣೆ- ಹೆಂಗಿತ್ತು ಗೊತ್ತಾ ಲಾಕ್ ಡೌನ್ ರಹಸ್ಯ…!
1 min readಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದ ಸಮಯದಲ್ಲೇ ಲಕ್ಷಾಂತರ ರೂಪಾಯಿ ಚಿನ್ನ, ಬೆಳ್ಳಿ, ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ತಾಂತ್ರಿಕ ಉಪಕರಣಗಳ ಸಹಾಯದಿಂದಲೇ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಕ್ಸಕ್ಲೂಸಿವ್ ವೀಡಿಯೋ..
ಹುಬ್ಬಳ್ಳಿ ರೇಲ್ವೆ ನಿಲ್ದಾಣದ ಬಳಿಯಿರುವ ಮೆಡಿಕಲ್ ಶಾಫ್ ಮಾಲೀಕ ದಿನೇಶ ಜೈನ್ ಮನೆಯನ್ನ ಮೇ 6ರ ರಾತ್ರಿ ಕಳ್ಳತನ ಮಾಡಿ ಪರಾರಿಯಾಗಿದ್ದ, ಆರೋಪಿಯನ್ನ ವಿಶೇಷವಾದ ತಂತ್ರಜ್ಞಾನ ಬಳಕೆ ಮಾಡಿಕೊಂಡು ಬಂಧನ ಮಾಡಲಾಗಿದೆ.
ಬಂಧಿತ ಆರೋಪಿ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರ ತಾಂಡಾದ ಗಣೇಶ ಶಂಕರ ಲಮಾಣಿ ಎಂಬಾತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಹಣವನ್ನ ವಶಕ್ಕೆ ಪಡೆಯಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶಹರ ಠಾಣೆಯ ಇನ್ಸಪೆಕ್ಟರ್ ಆನಂದ ಒನಕುದ್ರೆ ತಂಡ ಆರೋಪಿಯನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.