Posts Slider

Karnataka Voice

Latest Kannada News

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ “ನಾಮ ನಿರ್ದೇಶನ” ರದ್ದು ಮಾಡಿದ ಸರಕಾರ…

1 min read
Spread the love

ಬೆಂಗಳೂರು: ಇತ್ತೀಚೆಗಷ್ಟೇ ಕೆಲವು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಈಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದೆ.


ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದು, ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್‌ ಕಲಬುರ್ಗಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ ಆನಂದ, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ಕಾಶಿನಾಥ್‌ ನಾವಲಗಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್‌ ಪ್ರಹ್ಲಾದ ರಾವ್‌ ಧಾರವಾಡಕರ್‌, ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಅಶ್ವಿನಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌ ವಿ ರಾಜೀವ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಲಾಟಮೂರ್ತಿ, ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಬಿ ಶಾಂತಮೂರ್ತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಎಸ್‌ ರಮೇಶ್‌ ಹೊಳ್ಳ ಅವರ ನಾಮ ನಿರ್ದೇಶನ ರದ್ದುಗೊಳಿಸಲಾಗಿದೆ.


Spread the love

Leave a Reply

Your email address will not be published. Required fields are marked *

You may have missed