ರಾಜೇಂದ್ರ ಚೋಳನ್- ರೋಹಿಣಿ ಸಿಂಧೂರಿ ವರ್ಗಾವಣೆ
ಬೆಂಗಳೂರು: ರಾಜ್ಯ ಸರಕಾರ ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ರಾಜೇಂದ್ರ ಚೋಳನ್ ಅವರನ್ನ ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಿದೆ.
ಬೆಂಗಳೂರಿನಲ್ಲಿದ್ದ ರೋಹಿಣಿ ಸಿಂಧೂರಿಯವನ್ನ ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಮೈಸೂರಿನ ಬಿ.ಶರತ್ ಅವರನ್ನ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾಯಿಸಿದ್ದಾರೆ.
ಜೆ.ಮಂಜುನಾಥ, ಎಂ.ಆರ್.ರವಿ, ಪಿ.ಶಿವಶಂಕರ ಹಾಗೂ ಹೆಪ್ಸಿಬಾ ರಾಣಿ ಕೊರ್ಲಾಪಟ್ಟಿಯವರನ್ನ ವರ್ಗಾಯಿಸಿ ಆದೇಶ ಹೊರಡಿಸಿದೆ.