ಹುಬ್ಬಳ್ಳಿಯ ಇನೋವಾ ಕಾರಲ್ಲಿ 400ಕೆಜಿ ದನದ ಮಾಂಸ…!

ಅಕ್ರಮವಾಗಿ ಇನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ
ಭಟ್ಕಳ: ಅಕ್ರಮವಾಗಿ ದನದ ಮಾಂಸವನ್ನು ಇನೋವಾ ಕಾರಿನಲ್ಲಿ ಸಾಗಿಸುತ್ತಿರುವ ವೇಳೆ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ಕಾರನ್ನು ಅಡ್ಡಗಟ್ಟಿ ದನದ ಮಾಂಸ ವಶಕ್ಕೆ ಪಡೆದು ಇಬ್ಬರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳು ಹಾವೇರಿ ಮೂಲದ ಸಾಧಿಕ ಲೋಹಾರ್ ಹಾಗೂ ಮೊಹಮ್ಮದ್ ರಿಜ್ವಾನ್ ಮನವಳ್ಳಿ ಎಂದು ತಿಳಿದು ಬಂದಿದೆ.
ಇವರಿಬ್ಬರು ಸಿಲ್ವರ ಬಣ್ಣದ ಇನೋವಾ ಕಾರಿನಲ್ಲಿ ಸುಮಾರು 80 ಸಾವಿರ ಮೌಲ್ಯದ 400 ಕೆಜಿ ಆಗುವಷ್ಟು ದನದ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಯಾವುದೇ ಪರವಾನಿಗೆ ಇಲ್ಲದೇ. ಎಲ್ಲಿಂದಲೋ ಕಳುವು ಮಾಡಿಕೊಂಡು ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವಾಗ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ಕಾರನ್ನು ಅಡ್ಡಗಟ್ಟಿ ದನದ ಮಾಂಸ ಹಾಗೂ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.