ಪ್ರಧಾನಿ ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ “ಮತ್ತೆ ಶೆಟ್ಟರ್‌ಗೆ ಕೊಕ್”…!
1 min read
ಹುಬ್ಬಳ್ಳಿ: ಅವಳಿನಗರದಲ್ಲಿ ನಡೆಯುತ್ತಿರುವ ಯುವ ಜನೋತ್ಸವ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಮಯದಲ್ಲಿ ಮತ್ತೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನ ಕಡೆಗಣನೆ ಮಾಡಲಾಗಿದ್ದು, ತೀವ್ರ ಚರ್ಚೆಗೆ ಕಾರಣವಾಗುತ್ತಿದೆ.
ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ ಅವರನ್ನ ಮುಜುಗರಕ್ಕೀಡು ಮಾಡುವ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಬಿಜೆಪಿ ಪಾಳಯದಲ್ಲಿ ಬೇಸರವನ್ನುಂಟು ಮಾಡಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರೂ, ಜಗದೀಶ ಶೆಟ್ಟರ್ ಅವರ ಹೆಸರು ವೇದಿಕೆಯಲ್ಲಿ ಹಾಕದೇ ಇರುವುದರ ಹಿಂದೆ ಯಾರ ದುರುದ್ದೇಶವಿದೆ ಎಂಬುದು ಮಾತ್ರ ಚಿದಂಬರ ರಹಸ್ಯವಾಗಿ ಉಳಿದಿದೆ.