ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಮಾಲೆ ಹಾಕಿದ ಜೆಡಿಎಸ್ ಕ್ಯಾಂಡಿಟೇಟ್
1 min readಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ದಿನೇ ದಿನೇ ಕಾವೇರುತ್ತಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರವರಿಗೆ ಬೆಂಬಲ ಹೆಚ್ಚಾಗುತ್ತಿದ್ದು, ಇಂದು ಜೆಡಿಎಸ್ ನ ಅಧಿಕೃತ ಅಭ್ಯರ್ಥಿ ಕೂಡಾ ಚುನಾವಣೆಯಲ್ಲಿ ತಾವು ತಟಸ್ಥರಾಗಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ರು.
ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿ, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಖಾಸಗಿ ಹೊಟೇಲ್ ನಲ್ಲಿ ಸೇರಿದ ಜೆಡಿಎಸ್ ಮುಖಂಡರು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದರು.
ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ಶಿವಶಂಕರ ಕಲ್ಲೂರ, ಬಸವರಾಜ ಗುರಿಕಾರ ಅವರಿಗೆ ಮಾಲೆಯನ್ನ ಹಾಕುವ ಮೂಲಕ ಬೆಂಬಲವನ್ನ ನೀಡಿದರು. ಇದರಿಂದ ಪಕ್ಷೇತರ ಅಭ್ಯರ್ಥಿಗೆ ಮತ್ತಷ್ಟು ಬಲ ಬಂದತಾಗಿದೆ. ಈ ಸಮಯದಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಗುರುರಾಜ ಹುಣಸಿಮರದ, ರಾಜಣ್ಣ ಕೊರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಕ ವಲಯದಿಂದ ಬಂದಿರುವ ಬಸವರಾಜ ಗುರಿಕಾರ ಅವರಿಗೆ ಈಗಾಗಲೇ ಸಿಪಿಐ, ಸಿಪಿಐಎಂ ಪಕ್ಷಗಳು ಬೆಂಬಲ ನೀಡಿವೆ. ಈಗ ಜೆಡಿಎಸ್ ಕೂಡಾ ಬೆಂಬಲ ನೀಡಿದ್ದು, ಪಕ್ಷೇತರ ಅಭ್ಯರ್ಥಿಯ ಬಲ ಹೆಚ್ಚಾಗಿದೆ. ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ನಡೆಸಿರುವ ಬಸವರಾಜ ಗುರಿಕಾರರಿಗೆ ಜೆಡಿಎಸ್ ನ ಬೆಂಬಲ ಆನೆ ಬಲವನ್ನ ನೀಡಿದ್ದು ಮಾತ್ರ ಸುಳ್ಳಲ್ಲ.