Posts Slider

Karnataka Voice

Latest Kannada News

Spread the love

ನವದೆಹಲಿ: ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಏಪ್ರಿಲ್ ನಲ್ಲಿ ನಡೆಸಬೇಕಿದ್ದ JEE Main 2021 ಪರೀಕ್ಷೆಯನ್ನು ಸ್ಥಗಿತಗೊಳಿಸಿದೆ.

ಜೆಇಇ ಮುಖ್ಯ 2021 ಪರೀಕ್ಷೆಯ ಎರಡು ಸೆಶನ್ ಗಳು ಈಗಾಗಲೇ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಪೂರ್ಣಗೊಂಡಿವೆ. ಕೊರೋನಾದ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆ, ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಸೆಷನ್ ನ್ನು ಸ್ಥಗಿತಗೊಳಿಸಿದೆ.

ಇದಕ್ಕೂ ಮೊದಲು JEE Main 2021 Exam ಅನ್ನು ಏಪ್ರಿಲ್ 27 ರಿಂದ ಏಪ್ರಿಲ್ 30ರವರೆಗೆ ಆಯೋಜಿಸಲು ನಿರ್ಧರಿಸಲಾಗಿತ್ತು. ಈ ಕುರಿತು ಹೇಳಿಕೆ ನೀಡಿರುವ ಪರೀಕ್ಷಾ ಸಂಸ್ಥೆ, ಈ ಪರೀಕ್ಷೆಗಳ ನೂತನ ದಿನಾಂಕಗಳ ಮಾಹಿತಿಯನ್ನು ಪರೀಕ್ಷೆಗೂ 15 ದಿನ ಮುಂಚಿತವಾಗಿ ಸೂಚಿಸಲಾಗುವುದು ಎಂದು ಹೇಳಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್, “ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು NTAಗೆ , JEE MAIN 2021 ರ ಏಪ್ರಿಲ್ ಸೆಷನ್ ಅನ್ನು ಸ್ಥಗಿತಗೊಳಿಸಲು ಸಲಹೆ ನೀಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಶೈಕ್ಷಣಿಕ ಕರಿಯರ್ ಶಿಕ್ಷಣ ಸಚಿವಾಲಯದ  ಪ್ರಮುಖ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.


Spread the love

Leave a Reply

Your email address will not be published. Required fields are marked *