Posts Slider

Karnataka Voice

Latest Kannada News

ವ್ಯಾಪಾರವಾಗದ ಹಿನ್ನೆಲೆ: ನೇಣು ಬಿಗಿದುಕೊಂಡು ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

Spread the love

 

ಕಲಬುರ್ಗಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಜೀವನಕ್ಕೆ ಆಧಾರವಾಗಿದ್ದ ಹಣ್ಣಿನ ವ್ಯಾಪಾರವು ಕೈಕೊಟ್ಟ ಹಿನ್ನೆಲೆಯಲ್ಲಿ ವ್ಯಾಪಾರಿಯೋರ್ವ ನೇಣಿಗೆ ಶರಣಾದ ಘಟನೆ ಮೋಮಿನಪುರ ಬಡಾವಣೆಯಲ್ಲಿ ನಡೆದಿದೆ.

ಅಬ್ದುಲ್ ಖದೀರ್ ಮೃತ ಹಣ್ಣಿನ ವ್ಯಾಪಾರಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗಲೇ, ಆತನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಹಣ್ಣಿನ ವ್ಯಾಪಾರ ಮಾಡಲಾಗದೆ ವ್ಯಾಪಾರಿ ಕಂಗಾಲಾಗಿದ್ದ. ಸಾಲ ಮಾಡಿ ಜೀವನ ಸಾಗಿಸುತ್ತಿದ್ದ. ಲಾಕ್ ಡೌನ್ ಸಡಿಲಗೊಂಡ ನಂತರವೂ ವ್ಯವಹಾರ ಸರಿಯಾಗಿಯೇ ನಡೆಯಲೇ ಇಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *