ಕೊರೋನಾ ವೈರಸ್ ಪಾಸಿಟಿವ್ ಆಗಿದ್ದ 13ಜನರು ಆಸ್ಪತ್ರೆಯಿಂದ ಬಿಡುಗಡೆ
1 min readಕಲಬುರಗಿ: ಕೊರೋನಾ ಸೋಂಕಿನಿಂದ ಬಳಲಿದ್ದ 13 ಜನ ಒಂದೇ ದಿನ ಇಎಸ್ ಐ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದರೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 71 ಕೊರೋನಾ ಪೀಡಿತ ರೋಗಿಗಳು ಪತ್ತೆಯಾಗಿದ್ದವು. ಇದೀಗ ಒಟ್ಟು 44 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನೂ 6 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದು, ಉಳಿದ 21 ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.