ಕಲಘಟಗಿಗೆ ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ, ಚಂದ್ರಪ್ಪ

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸನ್ಮಾನ ಕಾರ್ಯಕ್ರಮಕ್ಕೆ ಮಾಜಿ ಸಚಿವ ಸಂತೋಷ ಲಾಡ ಜೊತೆಗೆ ಕಾಂಗ್ರೆಸ್ಸಿನ ಹಿರಿಯ ಮುಖಂಡರುಗಳಾದ ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ, ಚಂದ್ರಪ್ಪ ಆಗಮಿಸುತ್ತಿದ್ದಾರೆ.
ಕಲಘಟಗಿಯಲ್ಲಿರುವ ಸಂತೋಷ ಲಾಡ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ಗೆದ್ದು ಬಂದಿರುವ ಗ್ರಾಮ ಪಂಚಾಯತಿ ಸದಸ್ಯರುಗಳಿಗೆ ಸತ್ಕಾರ ಮಾಡಲಾಗುತ್ತಿದೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕರು ಕ್ಷೇತ್ರದಲ್ಲಿದ್ದರೂ, ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆದಿರುವುದು ಉತ್ತಮ ಸಾಧನೆಯನ್ನ ಮಾಡಿದೆ. ಇದೇ ಕಾರಣಕ್ಕೆ ಹಿರಿಯ ಮುಖಂಡರು ಕ್ಷೇತ್ರಕ್ಕೆ ಬರುತ್ತಿದ್ದು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ಹೆಚ್ಚಾಗಲಿದೆ.