ಹುಬ್ಬಳ್ಳಿಯ ರಾಜಧಾನಿ ಮೋಟಾರ್ಸ್, ಪವನ ಪಿಜಿಯಲ್ಲಿ ಕಳ್ಳತನ…

ಹುಬ್ಬಳ್ಳಿ: ನಗರದ ಎರಡು ಪ್ರಮುಖ ಸ್ಥಳಗಳಲ್ಲಿ ಕಳ್ಳತನ ನಡೆದಿದ್ದು, ನಗದು, ಲ್ಯಾಪ್ ಟಾಪ್, ಮೊಬೈಲ್ ಗಳನ್ನ ಕದ್ದು ಪರಾರಿಯಾಗಿದ್ದಾರೆ. ಒಂದು ಪ್ರಕರಣದಲ್ಲಿ ಸಿಸಿಟಿವಿಯಲ್ಲಿ ಕಳ್ಳನ ಚಲನವಲನ ಪತ್ತೆಯಾಗಿದೆ.

ಹುಬ್ಬಳ್ಳಿಯ ನ್ಯೂ ಕಾಟನ್ ಮಾರ್ಕೆಟಿನಲ್ಲಿರುವ ರಾಜಧಾನಿ ಮೋಟಾರ್ಸ ನಲ್ಲಿನ ಹಿಂಬದಿ ಶೆಟರ್ಸ್ ಮುರಿದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಬಾಕ್ಸಿನಲ್ಲಿದ್ದ 1 ಲಕ್ಷಕ್ಕೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.
ಹುಬ್ಬಳ್ಳಿಯ ಶಿರೂರ ಪಾರ್ಕಿನಲ್ಲಿರುವ ಪವನ ಪಿಜಿಯಲ್ಲಿಯೂ ಕಳ್ಳತನ ನಡೆದಿದ್ದು, ಲ್ಯಾಪ್ ಟಾಪ್, ಎರಡು ಮೊಬೈಲ್ ಹಾಗೂ ಹಣವನ್ನ ಕದ್ದುಕೊಂಡು ಹೋಗಲಾಗಿದೆ.
ಘಟನೆಯ ಬಗ್ಗೆ ಸಿಸಿಟಿವಿಯಲ್ಲಿ ಕಳ್ಳನ ದೃಶ್ಯಗಳು ಸೆರೆ ಸಿಕ್ಕಿದ್ದು, ಪೊಲೀಸರು ಆರೋಪಿಯ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ನಿರಂತರವಾಗಿ ಅವಳಿನಗರದಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿವೆ.