ಚೆಂಬೆಳಕಿನ ಕವಿ ಡಾ.ಚೆನ್ನವೀರ ಕಣವಿ ಅಸ್ತಂಗತ….
1 min readಧಾರವಾಡ: ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಅಸ್ತಂಗತರಾಗಿದ್ದಾರೆ ಎಂದು ಗೊತ್ತಾಗಿದೆ.
ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಣವಿಯವರು, ಈಗಷ್ಟೇ ಆರೋಗ್ಯದಲ್ಲಿ ಏರುಪೇರಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಖಚಿತ ಮೂಲಗಳಿಂದ ತಿಳಿದಿದೆ.
ಚನ್ನವೀರ ಕಣವಿ..
ವಯಸ್ಸು 93
ಜನನ 28-6-1928
ಜನ್ಮ ಗದಗ ತಾಲೂಕಿನ ಹೊಂಬಳ ಗ್ರಾಮ
ತಂದೆ ಸಕ್ಕರೆಪ್ಪ, ತಾಯಿ ಪಾರ್ವತವ್ವ
ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು
ಆರಂಭದಲ್ಲಿ ಗದಗ ತಾಲೂಕಿನ ಶಿರುಂದದಲ್ಲಿ ಶಿಕ್ಷಕರಾಗಿದ್ದ ತಂದೆ, ಹೀಗಾಗಿ ಶಿರುಂದದಲ್ಲಿಯೇ ಬಾಲ್ಯ ಕಳೆದ ಕಣವಿ
ನಾಲ್ಕನೇ ತರಗತಿವರೆಗೆ ಶಿರುಂದದಲ್ಲಿಯೇ ಶಿಕ್ಷಣ
ಬಳಿಕ ಧಾರವಾಡ ತಾಲೂಕಿನ ಗರಗ ಶಾಲೆಯಲ್ಲಿ 7ನೇ ತರಗತಿವರೆಗೆ ಶಿಕ್ಷಣ
ಬಾಲ್ಯದಲ್ಲಿ ಗಾಂಧಿ ಟೋಪಿ ನಾಟಕದಲ್ಲಿ ಅಭಿನಯಿಸಿದ್ದ ಕಣವಿ
ಮುಲ್ಕಿ ಪರೀಕ್ಷೆಯಲ್ಲಿ ಧಾರವಾಡ ಕೇಂದ್ರಕ್ಕೆ ಪ್ರಥಮ ಸ್ಥಾನ
ಧಾರವಾಡದ ಆರ್ಎಲ್ಎಸ್ನಲ್ಲಿ ಹೈಸ್ಕೂಲ್ ಶಿಕ್ಷಣ
ಧಾರವಾಡದ ಮುರುಘಾಮಠದಲ್ಲಿದ್ದುಕೊಂಡು ಹೈಸ್ಕೂಲ್ ಶಿಕ್ಷಣ
ಕರ್ನಾಟಕ ಕಾಲೇಜ್ನಲ್ಲಿ ಬಿಎ ಶಿಕ್ಷಣ
ಕಾಲೇಜ್ ವಿದ್ಯಾರ್ಥಿಯಾಗಿದ್ದಾಗ ಕಣವಿಯವರ ಕವನಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಹಾರೈಸಿದ್ದ ಡಿವಿಜಿ
ಧಾರವಾಡದ ಮಾಳಮಡ್ಡಿಯಲ್ಲಿ ಕಾವ್ಯಾನುಭವ ಮಂಪಟ ಆರಂಭಿಸಿ ಕವಿತಾ ವಾಚನ ಅಭಿಯಾನ ನಡೆಸಿದ್ದ ಹಿರಿಯ ಕವಿ
1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ
ಅದೇ ಕವಿವಿಯ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಆರಂಭ
ಬಳಿಕ 1956ರಲ್ಲಿ ಅದೇ ಪ್ರಸಾರಾಂಗ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ
ಪತ್ನಿ ಶಾಂತಾದೇವಿ ಕೂಡ ಸಾಹಿತಿ, ಕನ್ನಡದ ಖ್ಯಾತಿ ಕತೆಗಾರ್ತಿ
ಇತ್ತೀಚೆಗೆ ನಿಧನರಾಗಿದ್ದ ಪತ್ನಿ ಶಾಂತಾದೇವಿ
ಪತ್ನಿ ನಿಧನದ ಬಳಿಕ ಸ್ವಲ್ಪ ಲವಲವಿಕೆ ಕಳೆದುಕೊಂಡಿದ್ದ ಕಣವಿ
ವಿಶ್ವಭಾರತಿಗೆ ಕನ್ನಡದಾರತಿ…, ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ…, ಹೂವು ಹೊರಳುವುವು ಸೂರ್ಯನ ಕಡೆಗೆ…, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ… ಜನಪ್ರಿಯ ಕಾವ್ಯಗಳು
ಕವನ ಸಂಕಲನ
ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ, ಸೇರಿ 15ಕ್ಕೂ ಹೆಚ್ಚು ಕವನ ಸಂಕಲನ ಪ್ರಕಟ
ವಿಮರ್ಶಾ ಕೃತಿಗಳು:
ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ ವಿಮರ್ಶಾತ್ಮಕ ಕೃತಿಗಳು
ಮಕ್ಕಳ ಕೃತಿ:
ಹಕ್ಕಿ ಪುಕ್ಕ ಮತ್ತು ಚಿಣ್ಣರ ಲೋಕವ ತೆರೆಯೋಣ ಕವನ ಸಂಕಲನ
ಪ್ರಶಸ್ತಿ ಮತ್ತು ಪುರಸ್ಕಾರಗಳು
1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ
2008ರ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ
ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,
ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ,
ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್…
2020 ರ ಸಾಹಿತ್ಯ ಕ್ಷೇತ್ರದಿಂದ ನ್ಯೂಸ್ 18 ನಿಂದ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು