Karnataka Voice

Latest Kannada News

Spread the love

ಆರನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ: ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಕರ್ನಾಟಕ ಬಂದ್‌ಗೆ ಚುನ್ನಪ್ಪ ಪೂಜೇರಿ

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗೋರ್ಲಾಪುರ ಕ್ರಾಸ್‌ನಲ್ಲಿ ರೈತರ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಈವರೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಆಕ್ರೋಶಗೊಂಡ ರೈತ ಮುಖಂಡರಾದ ಚುನ್ನಪ್ಪ ಪೂಜೇರಿ ಹಾಗೂ ಶಶಿಕಾಂತ್ ಗುರೂಜಿ ಅವರು ರಾಜ್ಯಾದ್ಯಂತ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ರಾಜ್ಯದ ಎಲ್ಲಾ ಪದಾಧಿಕಾರಿಗಳು ಹಾಗೂ ರೈತರು ಬಂದ್‌ಗೆ ಸಜ್ಜಾಗುವಂತೆ ಅವರು ಸೂಚಿಸಿದ್ದಾರೆ.

ಆರನೇ ದಿನವೂ ಮುಂದುವರಿದಿರುವ ಗೋರ್ಲಾಪುರ ಕ್ರಾಸ್‌ನ ರೈತರ ಹೋರಾಟ ಇದೀಗ ರಾಜ್ಯಮಟ್ಟದ ಹೋರಾಟದ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.


Spread the love

Leave a Reply

Your email address will not be published. Required fields are marked *

You may have missed