ಬಿಜೆಪಿ ಬೆಂಬಲ- ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರಗೌಡ ಪಾಟೀಲ್…!

ಧಾರವಾಡ: ತೀವ್ರ ಪೈಪೋಟಿ ನಡೆಯುವ ಸಾಧ್ಯತೆಯಿದ್ದ ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಎಸ್.ಎಸ್.ಪಾಟೀಲ ಅವರ ಪುತ್ರ ಶಿವಕುಮಾರಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ.
ಭಾರತೀಯ ಜನತಾ ಪಕ್ಷದಿಂದ ಬೆಂಬಲ ಪಡೆದು ಆಯ್ಕೆಯಾದ ಶಿವಕುಮಾರಗೌಡ ಅವರಿಗೆ ಬಿಜೆಪಿ ಮುಖಂಡರು ಶುಭಾಶಯ ಕೋರಿದರು. ಉಪಾಧ್ಯಕ್ಷರಾಗಿ ಬಿಜೆಪಿಯ ನಿಂಗನಗೌಡ ಮರಿಗೌಡ್ರ ಅವಿರೋಧವಾಗಿ ಆಯ್ಕೆಯಾದರು.
ಮಾಜಿ ಸಚಿವ ಸಿ.ಸಿ.ಪಾಟೀಲ, ಕಳಕಪ್ಪ ಬಂಡಿ, ಶಿವರಾಜ ಸಜ್ಜನರ, ಬಸವರಾಜ ಕುಂದಗೋಳಮಠ, ಸೀಮಾ ಮಸೂತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.