ಕಿಚ್ಚ ಸುದೀಪ್ ಮುಂದಿನ ಸಿನಿಮಾ ‘ಮಾರ್ಕ್’…!!!

ನಟ ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ನೂತನ ಚಿತ್ರದ ಶೀರ್ಷಿಕೆ ಘೋಷಣೆಯಾಗಿದೆ. ಚಿತ್ರಕ್ಕೆ ‘ಮಾರ್ಕ್’ (MARK) ಎಂದು ಹೆಸರಿಡಲಾಗಿದ್ದು, ಶೀರ್ಷಿಕೆ ಅನಾವರಣ ಟೀಸರ್‌ವೊಂದನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಈ ವಿಷಯವನ್ನು ಬಹಿರಂಗಪಡಿಸಿದೆ. ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜೊತೆಯಾಗಿ ನಿರ್ಮಿಸುತ್ತಿರುವ ಈ ಸಿನಿಮಾ ಸುದೀಪ್ ಅವರ ವೃತ್ತಿಜೀವನದಲ್ಲಿ ಒಂದು ಮೈಲುಗಲ್ಲಾಗಲಿದೆ ಎಂದು ಚಿತ್ರತಂಡ ಭರವಸೆ ನೀಡಿದೆ. ಬ್ಲಾಕ್‌ಬಸ್ಟರ್ ‘ಮ್ಯಾಕ್ಸ್’ ಚಿತ್ರದ ನಂತರ ನಿರ್ದೇಶಕ ವಿಜಯ್ ಕಾರ್ತಿಕೇಯ ಮತ್ತು ಕಿಚ್ಚ ಸುದೀಪ್ ಅವರ ಈ ಎರಡನೇ ಸಹಯೋಗವು ಭಾರಿ ನಿರೀಕ್ಷೆ ಹುಟ್ಟಿಸಿದೆ.
ಚಿತ್ರಕ್ಕೆ ಅರ್ಜುನ್ ತ್ಯಾಗರಾಜನ್ ಮತ್ತು ಸೆಂಥಿ ತ್ಯಾಗರಾಜನ್ ಬಂಡವಾಳ ಹೂಡಿದ್ದು, ಚಿತ್ರದ ತಾಂತ್ರಿಕ ತಂಡದಲದಲ್ಲಿ ಅನುಭವಿ ಕಲಾವಿದರು ಸೇರಿಕೊಂಡಿದ್ದಾರೆ. ಚಿತ್ರಕ್ಕೆ ಖ್ಯಾತ ಸಂಗೀತ ಸಂಯೋಜಕ ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಜೊತೆಗೆ, ಶೇಖರ್ ಚಂದ್ರ ಛಾಯಾಗ್ರಹಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಎಂ ಟಿ ಶ್ರೀರಾಮ್ ಕಾರ್ಯನಿರ್ವಹಿಸುತ್ತಿದ್ದಾರೆ.